ಬೆಂಗಳೂರು, ಎ.16 (DaijiworldNews/PY) : ಕೆಲವರು ಲಾಕ್ಡೌನ್ ಹಾಗೂ ಸೀಲ್ಡೌನ್ ನಿಯಮಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಅನಾವಶ್ಯಕವಾಗಿ ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಾನೂನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಕ್ಕೆ ಅನುಮತಿ ನೀಡಿದ್ದು, ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂದುಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.
ಜನರು ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮುಖಾಂತರ ನಮ್ಮೊಂದಿಗೆ ಸಹಕರಿಸಬೇಕು. ಅದಲ್ಲದೇ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರೊಂದಿಗೆ ಕೊರೊನಾ ನಿಯಂತ್ರಿಸುವ ಬಗ್ಗೆ ಚರ್ಚೆ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವುದಾಗಿ ಹೇಳಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಕ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಮಾಣವು ನಿಯಂತ್ರಣದಲ್ಲಿದೆ. ಶೇ. 1.6ರಷ್ಟು ಸಾವಿನ ಪ್ರಮಾಣವಿದ್ದು, ಇದನ್ನು ಮತ್ತಷ್ಟು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದರು.