ಬೆಂಗಳೂರು, ಏ15 (Daijiworld News/MSP): ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ನ ರಾಮಸ್ವಾಮಿ ಪಾಳ್ಯದ ನಿವಾಸಿ 66 ವರ್ಷದ ವೃದ್ದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕೆಲದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಮುಂದಾಗಿದ್ದರು, ಅವರನ್ನು ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏ.10 ರಿಂದ ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಮಣಿಪುರದಿಂದ ಬೆಂಗಳೂರಿಗೆ ಮಾರ್ಚ್ 12 ರಂದು ಆಗಮಿಸಿದ್ದ ಇವರು ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ವಿಕ್ಟೋರಿಯಾಗೆ ರವಾನಿಸಲಾಗಿತ್ತು. ಇನ್ನು ರಾಜ್ಯದಲ್ಲಿ ಈವರೆಗೂ ಒಟ್ಟು 279 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ ೮೦ ಜನ ಗುಣಮುಖರಾಗಿದ್ದರೆ.