ಚಿತ್ರದುರ್ಗ, ಎ.16 (DaijiworldNews/PY) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರದಲ್ಲಿದ್ದ ಸಂದರ್ಭ ಎಲ್ಲಾ ಲೂಟಿ ಮಾಡಿದ್ದಾರೆ. ಅವರು ಕರ್ನಾಟಕ ರಾಜ್ಯದಲ್ಲಿ ಏನನ್ನೂ ಬಿಟ್ಟು ಹೋಗಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರೈತರ ಬಗ್ಗೆ ಕೃಷಿ ಇಲಾಖೆ ನಿರ್ಲಕ್ಷ್ಯ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನತೆ ಸಂಕಷ್ಟದಲ್ಲಿರುವ ಸಂದರ್ಭ ರಾಜಕೀಯ ಮಾಡುವುದು ದುರ್ದೈವದ ವಿಷಯ ಎಂದರು.
ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನೇಕ ಯೋಜನೆ ನೀಡಲಾಗಿದೆ. ರೈತರಿಗೆ ನೆರವಾಗುವಂತೆ ಉಚಿತ ಹಾಲು ವಿತರಣೆ ಹಾಗೂ ಮುಕ್ತ ಮಾರುಕಟ್ಟೆ ರೂಪಿಸಲಾಗಿದೆ. ಯಾವುದೇ ನಿರ್ವಂಧವಿಲ್ಲದೇ ಕೃಷಿ ಚಟುವಟಿಕೆ ನಿರಾತಂಕವಾಗಿ ನಡೆಯುತ್ತಿದೆ ಎಂದು ತಿಳಿಸಿದರು.