ಜಮ್ಮು ಕಾಶ್ಮೀರ, ಏ 17 (Daijiworld News/MSP): ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡೈರೂ ಕೀಗಮ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಉಗ್ರರು ಅವಿತು ಕುಳಿತುರುವ ಮಾಹಿತಿ ಪಡೆದ ಪೊಲೀಸ್, ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ತಂಡದಿಂದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಿತ್ತು.
ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಓರ್ವ ಉಗ್ರನನ್ನು ಎನ್ ಕೌಂಟರ್ ಮೂಲಕ ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದೆ.