ಬೆಂಗಳೂರು, ಏ 17 (Daijiworld News/MSP):ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಏರುಗತಿಯಲ್ಲಿ ಸಾಗಿದ್ದುಒಂದೇ ದಿನ ರಾಜ್ಯದಲ್ಲಿ ಸುಮಾರು 38 ಹೊಸ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ವೈರಸ್ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ.
ಈ ಪೈಕಿ 11 ವರ್ಷದೊಳಗಿನ ಐವರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಗುರುವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ ರಾಜ್ಯದಲ್ಲಿ 38 ಹೊಸ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ 10 ವರ್ಷದ ಬಾಲಕಿಯೊಬ್ಬಳು ಸೇರಿದಂತೆ ಒಂದೇ ಕುಟುಂಬದ 7 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 9, ಮೈಸೂರಿನಲ್ಲಿ 12, ಬೆಂಗಳೂರು ನಗರದಲ್ಲಿ 9, ಮಂಡ್ಯ 3, ಚಿಕ್ಕಬಳ್ಳಾಪುರ 3, ವಿಜಯಪುರ 2, ದ.ಕ. ಮತ್ತು ಬೀದರ್ನಲ್ಲಿ ತಲಾ 1 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 13 ಮಂದಿ ಬಲಿಯಾಗಿದ್ದಾರೆ.