ಬೆಂಗಳೂರು, ಎ.18 (Daijiworld News/MB) : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಇದ್ದು ಕಳೆದ 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ದಾಖಲಾಗಿದ್ದು 43 ಮಂದಿ ಮೃತಪಟ್ಟಿದ್ದಾರೆ.
ಇದೀಗ ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 14,378ಕ್ಕೆ ಏರಿಕೆಯಾಗಿದ್ದು ಈವರೆಗೆ 480 ಜನರು ಸಾವನ್ನಪ್ಪಿದ್ದಾರೆ. 1,992 ಜನ ಗುಣಮುಖರಾಗಿದ್ದಾರೆ.
ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ 3,323 ಜನರಿಗೆ ಸೋಂಕು ತಗಲಿದ್ದು 201 ಮಂದಿ ಮೃತಪಟ್ಟಿದ್ದಾರೆ.
ದೆಹಲಿಯಲ್ಲಿ ಒಟ್ಟು1,707 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ ೫೭೨, ಗುಜರಾತ್ನಲ್ಲಿ ೧೦೯೯, ಕರ್ನಾಟಕ ೩೫೯ ಜನರಿಗೆ ಸೋಂಕು ತಗಲಿದೆ.