ಎರ್ನಾಕುಳಂ, ಎ.18 (Daijiworld News/MB) : ಕೊರೊನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರನ್ನು ಭಾರತಕ್ಕೆ ವಾಪಾಸ್ ಕರೆತರಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಕೇರಳ ಹೈಕೋರ್ಟ್ಗೆ ಹೇಳಿದೆ.
ದುಬೈ ಮೂಲದ ಕೇರಳ ಮುಸ್ಲಿಂ ಸಾಂಸ್ಕೃತಿಕ ಕೇಂದ್ರ ಹಾಗೂ ಇತರರು ಯುಎಇ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಇರುವುದರಿಂದ ಅಲ್ಲಿರುವ ಭಾರತೀಯ ವಲಸಿಗರನ್ನು ಹಿಂದಕ್ಕೆ ಕರೆದುಕೊಂಡು ಬರಬೇಕೆಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಸಂದರ್ಭದಲ್ಲಿ ಲಾಕ್ಡೌನ್ ಸರಿಯಾದ ರೀತಿಯಲ್ಲಿ ಜಾರಿಗೊಳಿಸುವುದು ಹಾಗೂ ಕೊರೊನಾ ಹರಡದಂತೆ ನೋಡಿಕೊಳ್ಳುವುದು ಮಾತ್ರ ಮುಖ್ಯ ಉದ್ದೇಶವಾಗಿದೆ. ಎಲ್ಲೆಡೆ ಹರಡುತ್ತಿರುವ ಈ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಅದರಲ್ಲೂ ಮುಖ್ಯವಾಗಿ ಕೇವಲ ಒಂದು ರಾಜ್ಯದ ಪರವಾಗಿ ಈ ತೀರ್ಮಾನ ಕೈಗೊಳ್ಳಲಾಗದು. ಮುಂದೆ ಬೇರೆ ರಾಜ್ಯಗಳು ಕೂಡಾ ಇದೇ ರೀತಿಯಾಗಿ ಮಾಡಬಹುದು ಎಂದು ಕೇಂದ್ರ ಹೈಕೋರ್ಟ್ಗೆ ತಿಳಿಸಿದೆ.