ಬೆಂಗಳೂರು, ಎ.19 (Daijiworld News/MB) : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೊನಾ ವೈರಸ್ನಿಂದ ಭೀತಿ ಉಂಟಾಗಿದ್ದು ಆಶಾದಾಯಕ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಒಟ್ಟು 388 ಸೋಂಕಿತರ ಪೈಕಿ 106 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯದಲ್ಲಿ ಬಿಡುಗಡೆಯಾದವರ ಸರಾಸರಿ 27.3ರಷ್ಟಿದ್ದು ಇದರಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಜನರು ಗುಣಮುಖರಾಗಿದ್ದಾರೆ.
ಉಡುಪಿಯಲ್ಲಿ ನಾಲ್ಕು ಪ್ರಕರಣಗಳ ಪೈಕಿ ಮೂವರು ಡಿಸ್ಚಾರ್ಜ್ ಆಗಿದ್ದು ಓರ್ವ ವ್ಯಕ್ತಿ ಐಸೊಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹದಿಮೂರು ಮಂದಿ ಸೋಂಕಿತರ ಪೈಕಿ 12 ಮಂದಿ ಗುಣಮುಖರಾದಂತಾಗಿದ್ದು, ಕೇವಲ ಒಬ್ಬರು ಮಾತ್ರವೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹನ್ನೊಂದು ಸೋಂಕಿತರ ಪೈಕಿ ಒಂಬತ್ತು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು ಇಬ್ಬರು ಐಸೊಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.