ನವದೆಹಲಿ, ಎ.19 (DaijiworldNews/PY) : ಸರ್ಕಾರದ ಸೂಚನೆಯಂತೆ ಸಂಬಳ ಹಾಗೂ ಪಿಂಚಣಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಭಾನುವಾರ ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸುತ್ತಿದೆ ಎಂಬ ವರದಿಯ ಹಿನ್ನೆಲೆ ವೇತನವನ್ನು ಕಡಿತಗೊಳಿಸುವುದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರವು, ಕೇಂದ್ರ ಸರ್ಕಾರಿ ಉದ್ಯೋಗಿಗಳ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಎಂಬುದು ಸುಳ್ಳು ಸುದ್ದಿ. ಈ ವಿಚಾರವಗಿ ನಮ್ಮ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದೆ.
ಟ್ವೀಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಕ್ಷಣವೇ ಶೇರ್ ಮಾಡಿದ್ದಾರೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದು, ನಿವೃತ್ತಿ ವೇತನವನ್ನು ನಿಲ್ಲಿಸುತ್ತಾರೆ. ಶೇ.೨೦ರಷ್ಟು ಕಡಿತಗೊಳಿಸುತ್ತಾರೆ ಎನ್ನುವ ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ನಿವೃತ್ತ ನೌಕರರು ಆತಂಕಕ್ಕೊಳಗಾಗಿದ್ದಾರೆ. ಆದರೆ, ಇಂತಹ ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದು ಸಚಿವಾಲಯ ತಿಳಿಸಿದೆ.