National
ಪಾದರಾಯನಪುರ ಘಟನೆ - ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿಯ ಶಂಕೆ - ಶಾಸಕ ಜಮೀರ್
- Mon, Apr 20 2020 11:43:46 AM
-
ಬೆಂಗಳೂರು, ಎ.20 (Daijiworld News/MB) : ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಸಂಶಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ.
ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಅಹಿತಕರ ಘಟನೆ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ.
ಕೊರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದಲ್ಲ.
ಪಾದರಾಯನಪುರ ಗಲಾಟೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಕೆಲಸ ಶೀಘ್ರವಾಗಿ ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ತನಿಖೆಗೆ ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ.
ಪಾದರಾಯನಪುರದಲ್ಲಿ ನಡೆದ ಘಟನೆಗೆ ತಪ್ಪು ಮಾಹಿತಿ ಕೂಡಾ ಒಂದು ಕಾರಣ. ಅಲ್ಲಿನ ಜನರನ್ನು ತಪಾಸಣೆಗೆ ಒಳಪಡಿಸಲು ಬಿಬಿಎಂಪಿ ಸಿಬ್ಬಂದಿ ರಾತ್ರಿ ಹೋಗಿದ್ದ ಕಾರಣ ಜನ ಗೊಂದಲಕ್ಕೀಡಾಗಿ ವ್ಯಗ್ರರಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನು ಇನ್ನೂ ಸ್ವಲ್ಪ ಜಾಗರೂಕತೆಯಿಂದ ನಿರ್ವಹಿಸಬಹುದಿತ್ತು.
ಪಾದರಾಯನಪುರದಲ್ಲಿ ತಪಾಸಣೆಗೆ ರಾತ್ರಿ ಹೋಗುವುದು ಬೇಡ, ಹಗಲಿಗೆ ಹೋಗೋಣ ಎಂದು ಬಿಬಿಎಂಪಿ ಆಯುಕ್ತರಿಗೆ ತಿಳಿಸಿ ಭಾನುವಾರ ಇಡೀ ದಿನ ಕಾದಿದ್ದೆ. ಬಿಬಿಎಂಪಿ ಸಿಬ್ಬಂದಿ ನನ್ನನ್ನು ಸಂಪರ್ಕಿಸದೆ ನೇರವಾಗಿ ಅಲ್ಲಿಗೆ ಹೋಗಿದ್ದರಿಂದ ಸ್ವಲ್ಪ ಎಡವಟ್ಟಾಯಿತು.
ಪಾದರಾಯನಪುರದ ನಿವಾಸಿಗಳಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದವರು, ಬಡವರು ಮತ್ತು ಅಶಿಕ್ಷಿತರು. ಅವರು ಕೊರೊನಾ ಪರೀಕ್ಷೆಗೆ ಆಸ್ಪತ್ರೆಗೆ ಬರುವುದಿಲ್ಲ, ಇಲ್ಲಿಯೇ ಮಾಡಿ ಎಂದು ಹಟ ಮಾಡಿದ್ದಾರೆ. ಅವರಿಗೆ ಸರಿಯಾಗಿ ಮನವರಿಕೆ ಮಾಡಿಕೊಟ್ಟು ಕೊರೊನಾ ತಪಾಸಣೆಗೆ ಒಳಪಡಿಸಬೇಕಿತ್ತು.
ನಾನು ಭಾನುವಾರ ಕೊರೊನಾ ಸೋಂಕಿನಿಂದ ಮೃತಮಹಿಳೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದು ನಿಜ. ಕುಟುಂಬದವರು ಆಸ್ಪತ್ರೆಯಲ್ಲಿರಲಿಲ್ಲ. ಆಸ್ಪತ್ರೆಯ ಬಿಲ್ ಪಾವತಿಗೆ ಹಣ ಇಲ್ಲದೆ ಸಂಬಂಧಿಕರು ಪರದಾಡುತ್ತಿದ್ದರು, ಅದರಿಂದಾಗಿ ನಾನು ಹೋಗಬೇಕಾಯಿತು. ಇದೊಂದು ಮಾನವೀಯ ಕೆಲಸ ಎಂದು ಮಾಡಿದ್ದೇನೆ.
ಕೊರೊನಾಕ್ಕೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ ನನ್ನಿಂದ ದೂರ ಇರಿ ಎಂದು ಬಿಜೆಪಿಯ ಶಾಸಕರೊಬ್ಬರು ಹೇಳಿದ್ದಾರಂತೆ. ಈ ರೀತಿ ಯಾರಾದರೂ ಅವರ ಕ್ಷೇತ್ರದಲ್ಲಿ ಸತ್ತು ಅಂತ್ಯಕ್ರಿಯೆಗೆ ಯಾರೂ ದಿಕ್ಕಿಲ್ಲ ಎಂದಾದರೆ ಅಲ್ಲಿಗೂ ಹೋಗುತ್ತೇನೆ. ನನಗೆ ನನ್ನ ಜೀವ ಮುಖ್ಯಅಲ್ಲ, ಮಾನವೀಯತೆ ಮುಖ್ಯ ಎಂದು ಹೇಳಿದ್ದಾರೆ.
ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ.
— B Z Zameer Ahmed Khan (@BZZameerAhmedK) April 20, 2020
ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ.#COVIDಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಅಹಿತಕರ ಘಟನೆ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ. 1/4#COVID19
— B Z Zameer Ahmed Khan (@BZZameerAhmedK) April 20, 2020ಕೊರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದಲ್ಲ. 2/4#COVID19
— B Z Zameer Ahmed Khan (@BZZameerAhmedK) April 20, 2020ಪಾದರಾಯನಪುರ ಗಲಾಟೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಕೆಲಸ ಶೀಘ್ರವಾಗಿ ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ತನಿಖೆಗೆ ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. 3/4#COVID19
— B Z Zameer Ahmed Khan (@BZZameerAhmedK) April 20, 2020ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ. 4/4#COVID19
— B Z Zameer Ahmed Khan (@BZZameerAhmedK) April 20, 2020ಪಾದರಾಯನಪುರದಲ್ಲಿ ನಡೆದ ಘಟನೆಗೆ ತಪ್ಪುಮಾಹಿತಿ ಕೂಡಾ ಒಂದು ಕಾರಣ. ಅಲ್ಲಿನ ಜನರನ್ನು ತಪಾಸಣೆಗೆ ಒಳಪಡಿಸಲು ಬಿಬಿಎಂಪಿ ಸಿಬ್ಬಂದಿ ರಾತ್ರಿ ಹೋಗಿದ್ದ ಕಾರಣ ಜನ ಗೊಂದಲಕ್ಕೀಡಾಗಿ ವ್ಯಗ್ರರಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನು ಇನ್ನೂ ಸ್ವಲ್ಪ ಜಾಗರೂಕತೆಯಿಂದ ನಿರ್ವಹಿಸಬಹುದಿತ್ತು. 1/5#COVID19
— B Z Zameer Ahmed Khan (@BZZameerAhmedK) April 20, 2020ಪಾದರಾಯನಪುರದಲ್ಲಿ ತಪಾಸಣೆಗೆ ರಾತ್ರಿ ಹೋಗುವುದು ಬೇಡ, ಹಗಲಿಗೆ ಹೋಗೋಣ ಎಂದು ಬಿಬಿಎಂಪಿ ಆಯುಕ್ತರಿಗೆ ತಿಳಿಸಿ ಭಾನುವಾರ ಇಡೀ ದಿನ ಕಾದಿದ್ದೆ. ಬಿಬಿಎಂಪಿ ಸಿಬ್ಬಂದಿ ನನ್ನನ್ನು ಸಂಪರ್ಕಿಸದೆ ನೇರವಾಗಿ ಅಲ್ಲಿಗೆ ಹೋಗಿದ್ದರಿಂದ ಸ್ವಲ್ಪ ಎಡವಟ್ಟಾಯಿತು. 2/5#COVID19
— B Z Zameer Ahmed Khan (@BZZameerAhmedK) April 20, 2020ಪಾದರಾಯನಪುರದ ನಿವಾಸಿಗಳಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದವರು, ಬಡವರು ಮತ್ತು ಅಶಿಕ್ಷಿತರು. ಅವರು ಕೊರೊನಾ ಪರೀಕ್ಷೆಗೆ ಆಸ್ಪತ್ರೆಗೆ ಬರುವುದಿಲ್ಲ, ಇಲ್ಲಿಯೇ ಮಾಡಿ ಎಂದು ಹಟ ಮಾಡಿದ್ದಾರೆ. ಅವರಿಗೆ ಸರಿಯಾಗಿ ಮನವರಿಕೆ ಮಾಡಿಕೊಟ್ಟು ಕೊರೊನಾ ತಪಾಸಣೆಗೆ ಒಳಪಡಿಸಬೇಕಿತ್ತು. 3/5#COVID19
— B Z Zameer Ahmed Khan (@BZZameerAhmedK) April 20, 2020ನಾನು ಭಾನುವಾರ ಕೊರೊನಾ ಸೋಂಕಿನಿಂದ ಮೃತಮಹಿಳೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದು ನಿಜ. ಕುಟುಂಬದವರು ಆಸ್ಪತ್ರೆಯಲ್ಲಿರಲಿಲ್ಲ. ಆಸ್ಪತ್ರೆಯ ಬಿಲ್ ಪಾವತಿಗೆ ಹಣ ಇಲ್ಲದೆ ಸಂಬಂಧಿಕರು ಪರದಾಡುತ್ತಿದ್ದರು, ಅದರಿಂದಾಗಿ ನಾನು ಹೋಗಬೇಕಾಯಿತು. ಇದೊಂದು ಮಾನವೀಯ ಕೆಲಸ ಎಂದು ಮಾಡಿದ್ದೇನೆ. 4/5#COVID19
— B Z Zameer Ahmed Khan (@BZZameerAhmedK) April 20, 2020ಕೊರೊನಾಕ್ಕೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ ನನ್ನಿಂದ ದೂರ ಇರಿ ಎಂದು ಬಿಜೆಪಿಯ ಶಾಸಕರೊಬ್ಬರು ಹೇಳಿದ್ದಾರಂತೆ. ಈ ರೀತಿ ಯಾರಾದರೂ ಅವರ ಕ್ಷೇತ್ರದಲ್ಲಿ ಸತ್ತು ಅಂತ್ಯಕ್ರಿಯೆಗೆ ಯಾರೂ ದಿಕ್ಕಿಲ್ಲ ಎಂದಾದರೆ ಅಲ್ಲಿಗೂ ಹೋಗುತ್ತೇನೆ. ನನಗೆ ನನ್ನ ಜೀವ ಮುಖ್ಯಅಲ್ಲ, ಮಾನವೀಯತೆ ಮುಖ್ಯ. 5/5#COVID19
— B Z Zameer Ahmed Khan (@BZZameerAhmedK) April 20, 2020