ಬೆಂಗಳೂರು,ಏ 20 (Daijiworld News/MSP): ಬೆಂಗಳೂರಿನ ಪಾದರಾಯನಪುರದಲ್ಲಿನಡೆದ ಘಟನೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಂತವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ, ಒಳ್ಳೆಯ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರದೊಂದಿಗಿದೆ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಪಾದರಾಯಪುರದಲ್ಲಿ ನಡೆದ ವರ್ತನೆ ಖಂಡನೀಯ, ವ್ಯಕ್ತಿಗಳು ಮಾಡಿದ ಕೆಲಸಕ್ಕೆ ಒಂದು ಸಮುದಾಯಕ್ಕೆ ಅಂಟಿಸುವ ಕೆಲಸ ಬೇಡ. ಪಾದರಾಯನಪುರಲ್ಲಿ ಕಿಡಿಗೇಡಿಗಳು ಮಾಡಿದ ಖಂಡನೀಯ, ಸರ್ಕಾರ , ಪೊಲೀಸ್ ಇಲಾಖೆ ಕ್ರಮ ಇವರ ವಿರುದ್ದ ಕಠಿಣ ಜರುಗಿಸಿಬೇಕು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಖಂಡನೀಯ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ರು.
ಕಾನೂನಿಗೆ ಯಾರೇ ಆದರೂ ಬೆಲೆ ಕೊಡಬೇಕು ಕ್ರಿಮಿನಲ್ ಯಾವತ್ತಿದ್ದರೂ ಕ್ರಿಮಿನಲ್ ಆಗಿದ್ದಾರೆ. ಇನ್ನು ಕೆಲ ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುತ್ತಾರೆ. ಇವರ ವಿರುದ್ದವೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಇದಕ್ಕೂ ಮುಂಚೆ ಪಾದರಾಯನಪುರದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ನಡೆದ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಸ್ಲಿಂ ಮುಖಂಡರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವ ಸಿಎಂ ಇಬ್ರಾಹಿಂ, ಜಮೀರ್ ಅಹಮದ್ ಖಾನ್, ಎನ್ ಎ ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ನಜೀರ್ ಹಾಗೂ ಮತ್ತಿತರ ಮುಖಂಡರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.