ಬೆಂಗಳೂರು, ಎ.20 (DaijiworldNews/PY) : ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಘಟನೆಯ ಬಗ್ಗೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಪಾದರಾಯನಪುರ ಘಟನೆ ಖಂಡನೀಯ. ಈ ಘಟನೆಗೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸಬೇಕು. ಕೊರೊನಾ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲವಿದೆ. ನಾವು ಇದನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದಾರೆ.
ಯಾರೇ ಆದರೂ ಕಾನೂನಿಗೆ ಗೌರವ ನೀಡಬೇಕು. ಕಾನೂನಿಗೆ ವಿರುದ್ದವಾಗಿ ನಡೆದುಕೊಳ್ಳುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.