ಬೆಂಗಳೂರು, ಏ 20 (Daijiworld News/MSP): ರಾಜ್ಯದಲ್ಲಿ ಮತ್ತೆ ಇಂದು 18 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 408ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ಭಾನುವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆಯೊಳಗೆ 18 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ. ಇಂದು ವಿಜಯಪುರದಲ್ಲೊಂದೇ 11 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ಒಟ್ಟು 408 ಕೋವಿಡ್-19 ಪ್ರಕರಣಗಳಲ್ಲಿ 16 ಮಂದಿ ಮೃತಪಟ್ಟಿದ್ದು, 112 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಬ್ಬರಿಂದಲೇ 11 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ವಿಜಯಪುರದ ಎರಡು ಕುಟುಂಬಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಕಲ್ಬುರ್ಗಿಯಲ್ಲಿ 5 ಹೊಸ ಕೇಸ್ ಪತ್ತೆಯಾಗಿದೆ ಎನ್ನಲಾಗಿದೆ. ಗದಗ ಹಾಗೂ ಬೀದರ್ ನಲ್ಲಿ ಒಂದೊಂದು ಪ್ರಕರಣ ಬೆಳಕಿಗೆ ಬಂದಿದೆ.