ನವದೆಹಲಿ, ಎ.21 (Daijiworld News/MB) : ದೆಹಲಿಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯೊಬ್ಬರ ಸಹಾಯಕರೊಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದ ಆಯುಷ್ಮಾನ್ ಭಾರತ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಈ ಕಚೇರಿಯಲ್ಲಿದ್ದ 25 ಉದ್ಯೋಗಿಗಳನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಅಧಿಕಾರಿಯೊಬ್ಬರು, ಉದ್ಯೋಗಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಕಚೇರಿಯನ್ನು ಸೀಲ್ ಮಾಡಲಾಗಿದೆ. ಹಾಗೆಯೇ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 25 ಉದ್ಯೋಗಿಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಎಂದು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.