ಬೆಂಗಳೂರು, ಏ 22 (Daijiworld News/MSP): ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತಣಕ್ಕೆ ಸಿಗದೆ ದಿನದಿಂದ ದಿನಕ್ಕೆ ಲಾಕ್ ಡೌನ್ ನಡುವೆಯೂ ಏರಿಕೆ ಕಾಣುತ್ತಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಇಂದಿನ ಬೆಳಗ್ಗಿನ ವರದಿಯಲ್ಲಿ ಇಂದು ಒಂದೇ ದಿನ 7 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಲಬುರಗಿಯಲ್ಲಿ ಇಂದು 4 ತಿಂಗಳ ಮಗು ಸೇರಿದಂತೆ ಹೊಸದಾಗಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಇಂದು ಕಲಬುರಗಿಯ ಐದು ಜನರಿಗೆ ಕೊರೊನಾ ವೈರಸ್ ಪತ್ತೆಯಾದರೆ, ಬೆಂಗಳೂರಿನ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 17 ಜನರಿಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.