ನವದೆಹಲಿ, ಏ 23 (Daijiworld News/MSP): ದೇಶಾದ್ಯಂತ ಕೊರೊನಾ ವೈರಸ್ ಹರಡಂತೆ ಹೇರಲಾಗಿರುವ ಲಾಕ್ ಡೌನ್ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ರಾಜ್ಯಗಳಿಗೂ ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ ಮತ್ತು ರಾಜ್ಯಗಳಿಂದ ಮುಕ್ತವಾಗಿ ಸಲಹೆ ಪಡೆಯುತ್ತಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಇದೀಗ ಏ. 24ರಂದು ದೇಶದ ವಿವಿಧ ಗ್ರಾಮ ಪಂಚಾಯಿತಿಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾಗಿರುವ ಏ. 24ರಂದು ವಿವಿಧ ಗ್ರಾಮ ಪಂಚಾಯಿತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ.
ಇನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ಗೆ ಚಾಲನೆ ನೀಡಲಿದ್ದಾರೆ. ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಯೋಜನೆಗಳನ್ನು ತಯಾರಿಸಲು ಮತ್ತು ಕಾರ್ಯಗತಗೊಳಿಸಲು ಈ ಪೋರ್ಟಲ್ ಸಹಕಾರಿಯಾಗಲಿದೆ.