ಮುಂಬೈ, ಎ.23 (Daijiworld News/MB) : ಖಾಸಗಿ ಸುದ್ದಿ ವಾಹಿನಿಯೊಂದರ ಸಂಪಾದಕ ಮತ್ತು ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಹಾಗೂ ಅವರ ಪತ್ನಿ ಸಮಿಯಾ ಗೋಸ್ವಾಮಿ ಗುರುವಾರ ಮುಂಜಾನೆ ಮುಂಬೈಯಲ್ಲಿ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು ಇಬ್ಬರ ಬಂಧನ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ದಾಳಿ ನಡೆದ ಸಂದರ್ಭದಲ್ಲಿ ಅರ್ನಾಬ್ ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದ್ದು ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.
ಬುಧವಾರ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ ಕಾರಣಕ್ಕಾಗಿ ಎಫ್ಐಆರ್ ದಾಖಲಾಗಿದ್ದು ಇದೇ ಕಾರಣಕ್ಕೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅರ್ನಾಬ್ ಗೋಸ್ವಾಮಿ ಆರೋಪಿಸಿದ್ದಾರೆ.
ಇನ್ನು ಕೆಲವು ಸಾಮಾಜಿಕ ಕಾರ್ಯಕರ್ತರು ಅರ್ನಬ್ ಮೇಲಿನ ದಾಳಿ ಅನುಮಾನಸ್ಪದವಾಗಿದೆ. 2002ರಲ್ಲಿಯೇ ಇದೇ ರೀತಿಯಾಗಿ ಅವರು ಆಧಾರರಹಿತವಾಗಿ ಆರೋಪ ಮಾಡಿ ನಂತರ ಸಿಕ್ಕಿಬಿದ್ದಿದ್ದರು. ಈಗಲೂ ಅವರು ತಮ್ಮ ಮೇಲೆ ದಾಳಿಯಾಗಿದ್ದರ ಬಗ್ಗೆ ಮಾಡಿರುವ ವಿಡಿಯೋ ನಿನ್ನೆ ರಾತ್ರಿ 8 ಗಂಟೆಯ ವೇಳೆಯಲ್ಲಿ. ಇನ್ನು ದಾಳಿಯಾಗಿರುವುದು 12 ಗಂಟೆಯ ನಂತರ ಎಂದು ಹೇಳಿದ್ದಾರೆ. ಈ ಬಗ್ಗೆ ವೈಜ್ಞಾನಿಕ ತನಿಖೆ ನಡೆದರೆ ಅವರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ದಿನೂರವರು ಆರೋಪಿಸಿದ್ದಾರೆ.