ಬೆಳಗಾವಿ, ಎ.23 (Daijiworld News/MB) : ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಗೆ ಹೋಗಿ ಬಂದವರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿದೆ. ಅದರಿಂದಾಗಿ ಹೆಚ್ಚಿನ ಪರಿಣಾಮ ಉಂಟಾಗಿದೆ. ಇಲ್ಲದಿದ್ದಲ್ಲಿ ಬೆಳಗಾವಿಯು ಗ್ರೀನ್ ಝೋನ್ನಲ್ಲಿ ಇರುತ್ತಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, 32 ಕೊರೊನಾ ಪ್ರಕರಣಗಳು ರಾಯಬಾಗ ತಾಲ್ಲೂಕಿನ ಕುಡಚಿ ಮತ್ತು ತಾಲ್ಲೂಕಿನ ಹಿರೇಬಾಗೇವಾಡಿಯಲ್ಲೇ ದಾಖಲಾಗಿದೆ. ಅದು ಕೂಡಾ ನಾಲ್ಕು ಕುಟುಂಬಕ್ಕೆ ಈ ಸೋಂಕು ಹರಡಿದೆ. ಬೇರೆ ಎಲ್ಲಿಯೂ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ. ಹುಬ್ಬಳ್ಳಿ, ಧಾರವಾಡದಲ್ಲೂ ದೆಹಲಿಗೆ ಹೋಗಿ ಬಂದವರಿಂದಲ್ಲೇ ಕೊರೊನಾ ಪ್ರಕರಣಗಳು ಏರಿಕೆಯಾಗಿದೆ.
ಅಧಿಕಾರಿಗಳು ಕೊರೊನಾ ನಿಯಂತ್ರಣ ಮಾಡಲೆಂದು ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.