ಬೆಂಗಳೂರು, ಎ.24 (Daijiworld News/MB) : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,684 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದೆ. ಗುರುವಾರ 1,409 ಪ್ರಕರಣಗಳು ದಾಖಲಾಗಿದ್ದು ಇಂದು 1,684 ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,077ಕ್ಕೆ ಏರಿಕೆಯಾಗಿದೆ. 718 ಮಂದಿ ಸೋಂಕಿಗೆ ಬಲಿಯಾಗಿದ್ದು 4,747 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲೇ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಒಟ್ಟು 6,430 ಜನರಲ್ಲಿ ಸೋಂಕು ಪತ್ತೆಯಾಗಿದ್ದು 283 ಮಂದಿ ಸಾವನ್ನಪ್ಪಿದ್ದಾರೆ. 840 ಜನರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 445 ಸೋಂಕು ಪ್ರಕರಣಗಳು ದಾಖಲಾಗಿದ್ದು 17 ಮಂದಿ ಸಾವನ್ನಪ್ಪಿದ್ದಾರೆ. 145 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದ ಬಳಿಕ ಗುಜರಾತ್ನಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಸೋಂಕಿತರ ಸಂಖ್ಯೆ 2,624 ಏರಿಕೆಯಾಗಿದೆ. 112 ಮಂದಿ ಕೊರೊನಾಗೆ ಬಲಿಯಾಗಿದ್ದು 258 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,376 ಪ್ರಕರಣಗಳು, ತಮಿಳುನಾಡಿನಲ್ಲಿ 1,683 ಪ್ರಕರಣಗಳು, ರಾಜಸ್ಥಾನದಲ್ಲಿ 1,965 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 1,699, ಆಂಧ್ರ ಪ್ರದೇಶದಲ್ಲಿ 895 ಪ್ರಕರಣ, ತೆಲಂಗಾಣದಲ್ಲಿ 960 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1510, ಗುಜರಾತ್ 2624, ಕೇರಳ 447 ಪ್ರಕರಣಗಳು ದಾಖಲಾಗಿದೆ.