ಬೆಂಗಳೂರು, ಎ.24(DaijiworldNews/PY) : ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಖ್ಯ ನ್ಯಾ.ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿತು.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುವರಿಗೆ ದೂರು ನೀಡಲು ರಾಜ್ಯದಲ್ಲಿ ಯಾವೆಲ್ಲಾ ಸಹಾಯವಾಣಿಗಳು ಲಭ್ಯವಿದೆ. ದೂರುಗಳ ವಿಚಾರವಾಗಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದೆ. ಇದರೊಂದಿಗೆ ಮಾನಸಿಕ ಖಿನ್ನತೆಗೆ ಒಳಗಾದವರಿಗೆ ಯಾವ ನೆರವು ನೀಡಲಾಗಿದೆ ಎಂದು ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.