ನವದೆಹಲಿ, ಎ.24 (Daijiworld News/MB) : ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪಂಚಾಯತಿ ರಾಜ್ ದಿನಾಚರಣೆ ಪ್ರಯುಕ್ತವಾಗಿ ಪಂಚಾಯತ್ ಅಧ್ಯಕ್ಷರುಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದು ಈ ಸಂದರ್ಭದಲ್ಲಿ ಹಲವು ವಿಚಾರಗಳ ಬಗ್ಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಇ- ಗ್ರಾಮ್ಸ್ವರಾಜ್ಯ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಲೋಕಾರ್ಪಣೆ ಮಾಡಿದ್ದಾರೆ.
1.25 ಲಕ್ಷ ಪಂಚಾಯತ್ಗಳಿಗೆ ಬ್ರಾಡ್ಬ್ಯಾಂಡ್ ತಲುಪಿದ್ದು ಗ್ರಾಮಗಳಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳು ಕೂಡಾ ಹೆಚ್ಚಾಗಿದ್ದು ಗ್ರಾಮಗಳಲ್ಲಿ ಮೂರು ಲಕ್ಷಕ್ಕಿಂತ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳು ಇದೆ ಎಂದು ಹೇಳಿದರು.
ಕೊರೊನಾ ವೈರಸ್ ಎಂಬುದು ನಮಗೆ ಒಂದು ಪಾಠವಾಗಿದೆ. ಈ ಸಂದರ್ಭದಲ್ಲಿ ನಾವು ಸ್ವಾವಲಂಬಿಗಳಾಗ ಬೇಕೆಂದು ಪ್ರಧಾನಿ ಮೋದಿ ತಿಳಿಸಿದರು.
ಮೋದಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಪಂಚಾಯತಿ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡಾ ಮೋದಿಯೊಂದಿಗೆ ಉಪಸ್ಥಿತರಿದ್ದರು.