ಬೆಂಗಳೂರು, ಎ.25 (Daijiworld News/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನು ಬಾಹಿರ ಮಾತ್ರವಲ್ಲ ಅಮಾನವೀಯವಾದುದು ಕೂಡಾ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನು ಬಾಹಿರ ಮಾತ್ರವಲ್ಲ ಅಮಾನವೀಯವಾದುದು ಕೂಡಾ ಈ ಶಾಸಕರ ವಿರುದ್ಧ ಬಿ ಎಸ್ ಯಡಿಯೂರಪ್ಪ ಅವರು ತಕ್ಷಣ ಕ್ರಮಕೈಗೊಂಡು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರ ಚಿಕಿತ್ಸೆ ಮತ್ತು ಅಂತ್ಯ ಸಂಸ್ಕಾರದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದಕ್ಷಿಣ ಕನ್ನಡದಲ್ಲಿ ಕೊರೊನಾಕ್ಕೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ದ ಈ ಕಾನೂನಿನಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.