ಬೆಂಗಳೂರು, ಏ 25 (Daijiworld News/MSP): ರಾಜ್ಯದಲ್ಲಿ 24 ಗಂಟೆಗಳಲ್ಲಿ ಒಟ್ಟು 26 ಪ್ರಕರಣಗಳು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ರವರೆಗೆ 15 ಪ್ರಕರಣಗಳು ಖಚಿತಪಟ್ಟಿದ್ದು, ಬೆಂಗಳೂರು ನಗರ 13, ಬೆಳಗಾವಿ 9, ಮಂಡ್ಯ 1, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 1 , ಮೈಸೂರು -1 ಪ್ರಕರಣ ವರದಿಯಾಗಿದೆ.
ಬಿಬಿಎಂಪಿಯ ಕಂಟೈನ್ ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇವರನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕಿನ ಲಕ್ಷಣಗಳು ಕಂಡುಬಂದಿದೆ ಎನ್ನಲಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ೫೦೦ಕ್ಕೇರಿಕೆಯಾಗಿದೆ. 18 ಜನರು ಮೃತಪಟ್ಟಿದ್ದು, 158 ಜನರು ಗುಣಮುಖರಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 324 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ