ಬೆಳಗಾವಿ, ಎ.26 (Daijiworld News/MB) : ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್ಡೌನ್ ಮಾಡಲಾಗಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ಆದರೆ ಬೆಳಗಾವಿಯಲ್ಲಿ ಶನಿವಾರ ಅಂತ್ಯ ಸಂಸ್ಕಾರ ಮುಗಿಸಿಕೊಂಡು ಒಂದೇ ಅಂಬ್ಯುಲೆನ್ಸ್ ನಲ್ಲಿ 25 ತೆರಳಿದ್ದು ಅವರನ್ನು ತರಾಟೆಗೆ ತೆಗೆದುಕೊಂಡ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸೇರಿ 10 ಕ್ಕೂ ಅಧಿಕ ಜನರು ಸೇರುವಂತಿಲ್ಲ ಎಂದು ತಿಳಿಸಿದ್ದರು 10 ಕ್ಕಿಂತ ಅಧಿಕ ಮಂದಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೇ ಜಿಲ್ಲಾಸ್ಪತ್ರೆ ರಸ್ತೆಯಲ್ಲಿರುವ ಸ್ಮಶಾನಕ್ಕೆ ಹೋಗಿ ಅಂತ್ಯಸಂಸ್ಕಾರ ಮುಗಿಸಿ ಒಂದೇ ಆಂಬುಲೆನ್ಸ್ನಲ್ಲಿ 25 ಜನರು ಹಿಂದಿರುಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಸಿಪಿ ಚಂದ್ರಪ್ಪ, ಇನ್ಸಪೆಕ್ಟರ್ಗಳಾದ ಸಂಗಮೇಶ ಶಿವಯೋಗಿ, ಧೀರಜ ಶಿಂಧೆ ಇತರರು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೇಳುವುದು ನಮ್ಮೆಲ್ಲರ ಹಿತದೃಷ್ಟಿಯಿಂದ, ನಾವು ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲಿಸುವುದು ಅತಿ ಮುಖ್ಯ ಎಂದು ತಿಳಿಸಿದರು.
ಹಾಗೆಯೇ ಕಾನೂನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಇವರೆಲ್ಲರ ವಿರುದ್ಧ ಹಾಗೂ ವಾಹನದ ಮಾಲೀಕರ ವಿರುದ್ಧ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.