ಬೆಂಗಳೂರು, ಎ.27 (Daijiworld News/MB) : ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇರಿಸಲಾಗಿದ್ದ ಸಂಖ್ಯೆ 466 ಕೊರೊನಾ ಸೋಂಕಿತ ವ್ಯಕ್ತಿಯು ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತೀವ್ರ ಉಸಿರಾಟದ ತೊಂದರೆಯಿದ್ದ 50 ವರ್ಷದ ರೋಗಿ ನಂಬರ್ 466 ಬಳಲುತ್ತಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಸೋಮವಾರ ಆಸ್ಪತ್ರೆಯ ಟ್ರಾಮಾ ಸೆಂಟರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಹಾಗೆಯೇ ಆತ ತನ್ನ ಪಕ್ಕದಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟ ಕಾರಣದಿಂದಾಗಿ ಮಾನಸಿಕ ಖಿನ್ನತೆಯಿಂದ ಒಳಗಾಗಿದ್ದ ಎಂದು ವರದಿಯಾಗಿದೆ
ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.