ನವದೆಹಲಿ, ಏ 27 (Daijiworld News/MSP): ಭಾರತ ಲಾಕ್ ಡೌನ್ ಮುಂದುವರಿಸಬೇಕೇ ಬೇಡವೇ ಎಂಬುದರ ಬಗ್ಗೆ ಹಾಗೂ ಕೊರೊನಾ ತಡೆಗಟ್ಟುವ ಕುರಿತು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡೀಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ಆದರೆ ಇಂದಿನ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಸಂವಾದ ನಡೆಸಲು ಕೇರಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಲು ಸಮಯ ನಿಗದಿಪಡಿಸಿರಲಿಲ್ಲ. ಹೀಗಾಗಿ ಕೇರಳ ಸರ್ಕಾರದ ಪರವಾಗಿ ಕಾರ್ಯದರ್ಶಿ ಟೊಮ್ ಜೋಸೆಫ್ ಮುಖ್ಯಮಂತ್ರಿಗಳ ಪರವಾಗಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಕೇರಳ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿತ್ತು.
ಮೇ 3ರಂದು ರಾಷ್ಟ್ರಾದ್ಯಂತ ಎರಡನೇ ಸುತ್ತಿನ ಲಾಕ್ ಡೌನ್ ಕೊನೆಯಾಗುತ್ತಿರುವುದರಿಂದ ಇಂದಿನ ಸಭೆ ಮಹತ್ವದ್ದಾಗಿದೆ. ಮೂಲಗಳ ಪ್ರಕಾರ ಕೇರಳವೂ ತನ್ನ ಸಲಹೆಗಳನ್ನು ಲಿಖಿತ ರೂಪದಲ್ಲಿ ಕೇಂದ್ರಕ್ಕೆ ಸಲ್ಲಿಸಿದೆ ಎನ್ನಲಾಗಿದೆ.