ಮುಂಬೈ, ಎ.27 (Daijiworld News/MB) : ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಮಸ್ಯೆಗಳ ನಿವಾರಣೆಗಾಗಿ ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಸೂಕ್ತ ಆರ್ಥಿಕ ನೆರವು ನೀಡಬೇಕೆಂದು ಭಾನುವಾರ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಪತ್ರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದು ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರ ಬಹಳ ಆರ್ಥಿಕ ಸಂಕಷ್ಟದಲ್ಲಿದೆ. ರಾಜ್ಯಕ್ಕೆ ಸುಮಾರು ₹1 ಲಕ್ಷ ಕೋಟಿ ಕೊರತೆಯಿದೆ ಎಂದು ಹೇಳಿದ್ದಾರೆ.
ಸುಮಾರು 3,47,000 ಕೋಟಿ ಆದಾಯವನ್ನು 2020-2021 ಮಹಾರಾಷ್ಟ್ರ ಬಜೆಟ್ ಸಂದರ್ಭದಲ್ಲಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಈ ಅಲ್ಪ ಕಾಲದ ಆರ್ಥಿಕ ಚಟುವಟಿಕೆಗಳಿಂದ ಹೆಚ್ಚಿದನ್ನು ನಿರೀಕ್ಷೆ ಮಾಡಲಾಗುವುದಿಲ್ಲ ಎಂದಿದ್ದಾರೆ.