ನವದೆಹಲಿ, ಎ.27 (DaijiworldNews/PY) : ಕೊರೊನಾ ವಿರುದ್ದ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ 15 ಲಕ್ಷ ರೂ ಜೀವ ವಿಮೆ ಸೌಲಭ್ಯವನ್ನು ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.
ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಕೆಲ ದಿನಗಳ ಹಿಂದೆ ಕೊರೊನಾ ವಿರುದ್ದ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ 10 ಲಕ್ಷ ಜೀವ ವಿಮೆ ಘೋಷಿಸಿದ್ದರು. ಒಡಿಶಾ ಸಿಎಂ ಕೂಡಾ ಪತ್ರಕರ್ತರಿಗೆ 15 ಲಕ್ಷ ರೂ. ಜೀವ ವಿಮೆ ಸೌಲಭ್ಯ ಘೋಷಣೆ ಮಾಡಿದ್ದಾರೆ.
ಇದುವರೆಗೆ ದೇಶದಲ್ಲಿ ಸೋಂಕಿತರ ಪ್ರಮಾಣ ಅಧಿಕವಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮುಂಬೈಯಲ್ಲಿ ವಿವಿಧ ಮಾಧ್ಯಮಗಳ 53 ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿತ್ತು. ಅಲ್ಲದೇ ಚೆನ್ನೈನಲ್ಲಿ ಕೂಡಾ ಹಲವು ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿತ್ತು.