ಮುಂಬೈ, ಎ.28 (Daijiworld News/MB) : ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದೃಢಪಟ್ಟಿದ್ದು ಸೋಮವಾರ ಮೂವರು ಪೊಲೀಸರಲ್ಲೂ ಕೊರೊನಾ ಪಾಸಿಟಿವ್ ಬಂದಿದೆ. ಈ ಕಾರಣದಿಂದಾಗಿ 55 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸರಿಗೆ ರಜೆಯ ಮೇಲೆ ತೆರಳುವಂತೆ ಸೂಚನೆ ನೀಡಲಾಗಿದೆ.
ಮಂಗಳವಾರ ಕೊರೊನಾ ವೈರಸ್ ದೃಢಪಟ್ಟ ಮೂವರು ಪೋಲಿಸರು 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು ಈ ಹಿನ್ನಲೆಯಲ್ಲಿ 55 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸರು ಹಾಗೂ ಅಧಿಕಾರಿಗಳ ರಕ್ಷಣೆಯ ದೃಷ್ಟಿಯಿಂದ ಈ ಸೂಚನೆ ನೀಡಲಾಗಿದೆ ಎಂದು ಮುಂಬೈ ಪೊಲೀಸ್ ಇಲಾಖೆ ತಿಳಿಸಿದೆ.
ಅತೀ ಹೆಚ್ಚು ವಯಸ್ಸದವರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಅಧಿಕ ಆ ನಿಟ್ಟಿನಲ್ಲಿ 55 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸರಿಗೆ ರಜೆ ತೆಗೆದುಕೊಳ್ಳುವಂತೆ ತಿಳಿಸಲಾಗಿದೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ 8590 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 1282 ಜನರು ಗುಣಮುಖರಾಗಿದ್ದಾರೆ. 369 ಜನರು ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 29,435 ಜನರಿಗೆ ಕೊರೊನಾ ಸೋಂಕು ತಗುಲಿದ್ದು 6869 ಜನರು ಗುಣಮುಖರಾಗಿದ್ದಾರೆ, 934 ಸೋಂಕಿತರು ಮೃತಪಟ್ಟಿದ್ದಾರೆ.