ಬೆಂಗಳೂರು, ಮೇ.01 (DaijiworldNews/PY) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಮಿಕ ಬಂಧುಗಳಿಗೆ ಕಾರ್ಮಿಕ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.
ದೇಶಾದ್ಯಂತ ಕೊರೊನಾ ಸೋಂಕಿನಿಂದ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ದವಾಗಿದ್ದವು. ಹಾಗಾಗಿ ಇದರಿಂದ ಕಾರ್ಮಿಕ ಬಂಧುಗಳಿಗೆ ಹೆಚ್ಚು ತೊಂದರೆ ಉಂಟಾಯಿತು. ಸರ್ಕಾರವು ಇಂತಹ ಕಠಿಣ ಸಂದರ್ಭದಲ್ಲಿ ನಿಮ್ಮೊಂದಿಗೆ ನಿಂತಿದೆ ಎಂದು ತಿಳಿಸಿದರು.
ಆರ್ಥಿಕ ಚಟುವಟಿಕೆಗಳು ಶೀಘ್ರದಲ್ಲಿಯೇ ಪುನಃ ಪ್ರಾರಂಭವಾಗುವ ನಿರೀಕ್ಷೆಯಿದೆ. ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ನಿಟ್ಟಿನಲ್ಲಿ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದ ಕಾರಣ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದ ಕೂಡಲೇ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕಾರ ಮಾಡುವಂತೆ ಕೋರುತ್ತೇನೆ ಎಂದರು.