ನವದೆಹಲಿ, ಮೇ 02 (Daijiworld News/MB) : ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದ್ದು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,293 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 71 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟಾರೆಯಾಗಿ ಕೊರೊನಾ ಸೋಂಕಿತರ ಸಂಖ್ಯೆ 37336 ಕ್ಕೆ ಏರಿಕೆಯಾಗಿದ್ದು ಈವರೆಗೂ 1218 ಕೊರೊನಾದಿಂದಾಗಿ ಮೃತರಾಗಿದ್ದಾರೆ. 9951 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ದೇಶದಲ್ಲೇ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 11,506 ಕ್ಕೆ ಏರಿಕೆಯಾಗಿದೆ. 485 ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದು 1879 ಜನರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದ ಬಳಿಕ ಗುಜರಾತ್ನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 4721 ಜನರಿಗೆ ಸೋಂಕು ತಗುಲಿದೆ. 236 ಸೋಂಕಿತರು ಸಾವನ್ನಪ್ಪಿದ್ದು 735 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 589 ಸೋಂಕು ಪ್ರಕರಣಗಳು ದಾಖಲಾಗಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. 251 ಮಂದಿ ಗುಣಮುಖರಾಗಿದ್ದಾರೆ.
ಮಧ್ಯಪ್ರದೇಶದಲ್ಲಿ 145, ದೆಹಲಿಯಲ್ಲಿ 61, ರಾಜಸ್ಥಾನದಲ್ಲಿ 62, ಉತ್ತರ ಪ್ರದೇಶದಲ್ಲಿ 42 ಮತ್ತು ಆಂಧ್ರ ಪ್ರದೇಶದಲ್ಲಿ 33 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ದೆಹಲಿಯಲ್ಲಿ 3738 ಪ್ರಕರಣಗಳು, ತಮಿಳುನಾಡಿನಲ್ಲಿ 2526 ಪ್ರಕರಣಗಳು, ರಾಜಸ್ಥಾನದಲ್ಲಿ 2666 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2719 ಆಂಧ್ರ ಪ್ರದೇಶದಲ್ಲಿ 1463 ಪ್ರಕರಣ, ತೆಲಂಗಾಣದಲ್ಲಿ 1039 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 2328, ಕೇರಳ 497 ಪ್ರಕರಣಗಳು, ಜಮ್ಮು ಕಾಶ್ಮೀರದಲ್ಲಿ 639 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 795 ಪ್ರಕರಣಗಳು ದಾಖಲಾಗಿದೆ.