ನವದೆಹಲಿ, ಮೇ 2 (Daijiworld News/MSP): ವಿಶ್ವವೇ ಕೊರೊನಾ ವಿರುದ್ಧ ಒಂದಾಗಿ ಹೋರಾಟ ನಡೆಸುತ್ತಿದ್ದರೆ ಅತ್ತ ಕಡೆ ಪಾಪಿ ಪಾಕ್ ಮಾತ್ರ, ತನ್ನ ಕುತಂತ್ರದ ದ್ವೇಷಾಸೂಯೆಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ.
ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನಾ ಪಡೆಗಳು ಮತ್ತೆ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಪಾಕ್ ಇದ್ದಕ್ಕಿದ್ದಂತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಇದರ ಪರಿಣಾಮ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಈ ಯೋಧರ ತ್ಯಾಗಕ್ಕಾಗಿ ಸೇನೆ ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ಎನ್ಒಸಿಯಲ್ಲಿ ಬಳಿ ಶುಕ್ರವಾರ ರಾತ್ರಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ಯೋಧರು ಮತ್ತು ನಾಲ್ಕು ವರ್ಷದ ಬಾಲಕನೊಬ್ಬ ಸೇರಿದಂತೆ ಮೂವರು ಗ್ರಾಮಸ್ಥರು ಗಾಯಗೊಂಡಿದ್ದರು.