ಬೆಂಗಳೂರು, ಮೇ 2 (Daijiworld News/MSP): ಕೊರೊನಾ ಕರ್ನಾಟಕದಲ್ಲಿ ರಣಕೇಕೆ ಹಾಕುತ್ತಿದ್ದು, ದಾವಣೆಗೆರೆಯ ಬಳಿಕ ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 25 ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ಮತ್ತೆ 9 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ.
ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ತಲಾ 2, ಬೆಂಗಳೂರು ನಗರ, ಬೀದರ್ , ಬೆಳಗಾವಿ, ಚಿಕ್ಕಬಳ್ಳಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಈ ಪೈಕಿ ೨೫೫ ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.