ಬೆಂಗಳೂರು, ಮೇ 02 (Daijiworld News/MB) : ರಾಜ್ಯದಲ್ಲಿ ಶನಿವಾರ ಒಂದೇ ದಿನದಲ್ಲಿ 12 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.
ರಾಜ್ಯ ಸರ್ಕಾರ ಶನಿವಾರ ಸಂಜೆ ಬುಲೆಟಿನ್ ಬಿಡುಗಡೆ ಮಾಡಿದ್ದು ಬೆಂಗಳೂರಿನಲ್ಲಿ 4, ವಿಜಯಪುರದಲ್ಲಿ 2, ತುಮಕೂರಿನಲ್ಲಿ 2, ಬೀದರ್, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ತಲಾ ಒಂದು ಕೊರೊನಾ ಪ್ರಕರಣಗಳು ವರದಿಯಾಗಿದೆ.
ಇಂದು ಕೊರೊನಾದಿಂದಾಗಿ ಬೀದರ್ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧ ಸಾವನ್ನಪ್ಪಿದ್ದು ಕೊರೊನಾಗೆ ಈವರೆಗೆ ಕರ್ನಾಟಕದಲ್ಲಿ 25 ಜನರು ಬಲಿಯಾಗಿದ್ದಾರೆ.
ಶುಕ್ರವಾರ ರಾಜ್ಯದಲ್ಲಿ ಒಟ್ಟು 30 ಹೊಸ ಪ್ರಕರಣಗಳು ವರದಿಯಾಗಿದ್ದವು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ರಾಜ್ಯದಲ್ಲೂ ಕಂಟೇನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.