ಬೆಂಗಳೂರು, ಮೇ 03 (Daijiworld News/MB) : ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣದಿಂದಾಗಿ ನಿಸಾರ್ ಅಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
84 ವರ್ಷದವರಾಗಿದ್ದ ನಿಸಾರ್ ಅವರು 1935 ಫೆಬ್ರವರಿ 5 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ಜನಿಸಿದ್ದು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ನಿತ್ಯೋತ್ಸವ ಹಾಡು ಇಂದಿಗೂ ಪ್ರಸಿದ್ಧಿಯಾಗಿದೆ.
ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.
1981 ರಾಜ್ಯೋತ್ಸವ ಪ್ರಶಸ್ತಿ, 2008 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿ ಸೇರಿದಂತೆ ತಮ್ಮ ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಮನದ ಗಾಂಧಿ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಅನಾಮಿಕ ಆಂಗ್ಲರು ಇವರ ಪ್ರಮುಖ ಕಥಾ ಸಂಕಲನವಾಗಿದೆ.