ಬೆಂಗಳೂರು, ಮೇ 05 (Daijiworld News/MB) : ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ಕೊರೊನಾದಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ.
ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ರವರೆಗೆ ರಾಜ್ಯದಲ್ಲಿ ಒಟ್ಟು 8 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು ವಿಜಯಪುರಲ್ಲಿ 62 ರ ವೃದ್ದೆ ಸಾವನ್ನಪ್ಪಿದ್ದು ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವಿಜಯಪುರದಲ್ಲಿ ಕೊರೊನಾಗೆ ಬಲಿಯಾದ ವೃದ್ದೆ p-640 ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ದೃಢಪಟ್ಟಿರುವ 8 ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 3, ಬಾಗಲಕೋಟೆಯಲ್ಲಿ 2 ಹಾಗೂ ಬಳ್ಳಾರಿ, ದಕ್ಷಿಣ ಕನ್ನಡ, ಭಟ್ಕಳದಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿದೆ.