ಮುಂಬೈ, ಮೇ 06 (Daijiworld News/MB) : ಲಾಕ್ಡೌನ್ ಸಡಿಲಿಕೆಯಾದ ಬಳಿಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿದೆ. ದೇಶದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಇನ್ನಷ್ಟು ಏರಿಕೆಯಾಗುತ್ತಿದ್ದಂತೆ ಬೃಹತ್ ಮುಂಬೈಯ ಮಹಾನಗರ ಪಾಲಿಕೆ ಮದ್ಯ ಮಾರಾಟ ಸ್ಥಗಿತಕ್ಕೆ ತೀರ್ಮಾನ ಮಾಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಪಾಲಿಕೆ ಮಂಗಳವಾರ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು 15000 ದ ಗಡಿ ದಾಟಿದೆ. ಆ ಹಿನ್ನಲೆಯಲ್ಲಿ ದಿನಸಿ ಮತ್ತು ಔಷಧಿ ಅಂಗಡಿಗಳನ್ನು ಮಾತ್ರ ತೆರೆಯಲಾಗುವುದು ಎಂದು ತಿಳಿಸಿದೆ.
ಹಾಗೆಯೇ ಮುಂಬೈ ಮಹಾನಗರ ಪಾಲಿಕೆಯನ್ನು ಅತ್ಯವಶ್ಯಕವಲ್ಲದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮತ್ತು ಮದ್ಯದಂಗಡಿಗಳನ್ನು ತೆರೆಯದಂತೆ ಆದೇಶ ನೀಡಿದೆ.