ಶ್ರೀನಗರ, ಮೇ 06 (Daijiworld News/MB) : ಭಾರತೀಯ ಸೇನಾಪಡೆ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ನಡೆಸಿದ ಎನ್ಕೌಂಟರ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ ಎಂದು ಬುಧವಾರ ತಿಳಿದು ಬಂದಿದೆ.
ಸೇನಾಪಡೆಗೆ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಲಭಿಸಿದ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಓರ್ವ ಉಗ್ರನನ್ನು ಎನ್ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ.
ಕಾರ್ಯಾಚರಣೆ ಪ್ರಸ್ತುತ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.