ಬೆಂಗಳೂರು, ಮೇ 08 (DaijiworldNews/PY) : ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಸಂಬಳ ನೀಡುವ ನಿಟ್ಟಿನಲ್ಲಿ ಒಟ್ಟು 487 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಉಪಮುಖ್ಯ ಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬಿಡುಗಡೆಯಾದ ಈ ಮೊತ್ತದಲ್ಲಿ ಸುಮಾರು 325 ಕೋಟಿ ರೂಪಾಯಿಗಳನ್ನು ಎಪ್ರಿಲ್ ತಿಂಗಳಿನ ಸಂಬಳಕ್ಕಾಗಿ ಬಳಕೆಯಾಗಲಿದ್ದು, ಸಿಬ್ಬಂದಿಗಳ ಬ್ಯಾಂಕ್ ಖಾತೆಗೆ ಸಂಬಳವನ್ನು ಜಮಾ ಮಾಡಲಾಗುವುದು ಎಂದಿದ್ದಾರೆ.