ಮುಂಬೈ, ಮೇ 09 (Daijiworld News/MSP): ಕೊರೊನಾ ಸಂಕಷ್ಟದ ದಿನಗಳಲ್ಲಿ ಲಾಕ್ ಡೌನ್ ಇದ್ದರೂ, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ವ್ಯಕ್ತಿಯೋರ್ವ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ ಕನಿಷ್ಟ 20 ಜನರ ಸೇರುವಂತಿಲ್ಲ, ಆದರೆ ಪಾನಪ್ರೀಯರು ಮದ್ಯದಂಗಡಿ ಮುಂದೆ ಒಂದು ಸಾವಿರಕ್ಕೂ ಹೆಚ್ಚು ಜನ ನಿಂತರೂ ಯಾವುದೇ ಸಮಸ್ಯೆ ಇಲ್ಲವೇ ? ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಕೇಂದ್ರದ ವಿರುದ್ದ ನೇರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಗುಂಪುಸೇರುವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಶರಾಬು ಅಂಗಡಿಗಳ ಮುಂದೆ ದಿನನಿತ್ಯ 1000 ಜನರು ನಿಲ್ಲುತ್ತಿದ್ದಾರೇಕೆ? ಏಕೆಂದರೆ, ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1000 ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.