ನವದೆಹಲಿ, ಮೇ 09 (DaijiworldNews/PY) : ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರಿಗೆ ಆರೋಗ್ಯ ಸರಿಯಿಲ್ಲ. ಆದ ಕಾರಣದಿಂದ ಅವರು ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿಲ್ಲ ಎನ್ನುವ ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಅಮಿತ್ ಶಾ ಅವರು ಟ್ವಿಟ್ಟರ್ನಲ್ಲಿ ಎಲ್ಲಾ ವದಂತಿಗಳಿಗೆ ಸ್ಪಷ್ಟವಾದ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.
ಯಾರೆಲ್ಲ ನನ್ನ ವಿರುದ್ದವಾಗಿ ವದಂತಿ ಹಬ್ಬಿಸಿದ್ದಾರೋ ಅದರಿಂದಾಗಿ ನನ್ನ ಆರೋಗ್ಯ ಹೆಚ್ಚಾಗುತ್ತದೆ ಎಂಬುದಾಗಿ ನಂಬಿದ್ದೇನೆ. ಅರ್ಥವಿಲ್ಲದಿರುವ ಆಲೋಚನೆಯನ್ನು ಬಿಡಿ.ನಾನು ನನ್ನ ಕರ್ತವ್ಯಗಳನ್ನು ನಿರ್ವಹಿಸುತ್ತೇನೆ. ನಿಮ್ಮ ಕೆಲಸವನ್ನು ನೀವಿ ಮಾಡಿ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಅಥವಾ ಯಾವುದೇ ಸಭೆ ಇರಬಹುದು ಪ್ರತಿನಿತ್ಯ ಸುದ್ದಿಯಾಗುತ್ತಿರುತ್ತಾರೆ. ಆದರೆ, ಶಾ ಅವರಿ ಇಲ್ಲಿಯವೆಗೆ ಒಂದೇ ಒಂದು ಸುದ್ದಿಗೋಷ್ಠಿ ನಡಸಿಲ್ಲ. ದೇಶದ ಆಂತರಿಕ ವಿಚಾರ ಬಂದ ಸಂದರ್ಭ ಗೃಹ ಸಚಿವರೇ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾರೆ. ಹಾಗಾಗಿ ಅಮಿತ್ ಶಾ ಅವರು ಬಹಿರಂಗವಾಗಿ ಕಾಣಿಸಿಕೊಳ್ಳದ ಕಾರಣ ಸಾಮಾಜಿಕ ಜಾಲತಾಣದಲ್ಲಿ ಶಾ ಅವರ ಆರೋಗ್ಯದ ವಿಚಾರ ಪ್ರಸ್ತಾಪವಾಗಿತ್ತು.