ಕೋಲ್ಕತಾ, ಮೇ 09 (DaijiworldNews/SM): ಕಾರ್ಮಿಕರು ನಿರಾಶ್ರಿತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರು ಮಾಡಿರುವ ಆರೋಪಕ್ಕೆ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದು, ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.
ಅವ್ಯವಸ್ಥಿತ ಲಾಕ್ ಡೌನ್ ಹೇರುವ ಮೂಲಕ ಕೇಂದ್ರ ಸರಕಾರ ಕಾರ್ಮಿಕರನ್ನು ಸಂಕಷ್ಟಕ್ಕೀಡು ಮಾಡಿದೆ. ಕಾರ್ಮಿಕರ ಬಗ್ಗೆ ಮಾತನಾಡುವ ಯಾವುದೇ ಅರ್ಹತೆ ಕೇಂದ್ರ ಸರಕಾರಕ್ಕೆ ಇಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ವಲಸೆ ಕಾರ್ಮಿಕರ ಪರವಾಗಿ ಪಶ್ಚಿಮ ಬಂಗಾಳ ಸರಕಾರ ಇದ್ದು, ಅವರನ್ನು ತಮ್ಮ ಊರುಗಳಿಗೆ ರವಾನಿಸಲು 8 ವಿಶೇಷ ರೈಲುಗಳ ಓಡಿಸಲು ಯೋಜನೆ ರೂಪಿಸಿದೆ ಎಂದು ಅವರು ತಿಳಿಸಿದ್ದಾರೆ.
ವಲಸೆ ಕಾರ್ಮಿಕರ ವಿಚಾರ ಇದೀಗ ಕೇಂದ್ರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ. ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ ಎಂದು ಆರೋಪಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಟಿಎಂಸಿ ತಿರುಗೇಟು ನೀಡಿದೆ.