ಬೆಂಗಳೂರು, ಮೇ 10 (DaijiworldNews/PY) : ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್ಲೈನ್ ಮೂಲಕ ಪಾಠ, ಬೋಧನೆ ಮಾಡಬೇಕು. ಮೇ 30ರೊಳಗೆ ಎಲ್ಲ ಪದವಿ ಪಠ್ಯಕ್ರಮ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಶನಿವಾರ ರಾಜ್ಯದ ಎಲ್ಲಾ ಸರಕಾರಿ ಹಾಗೂ ಖಾಸಗಿ ವಿ.ವಿ. ಉಪಕುಲಪತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಮೇ 17ರ ಬಳಿಕ ಪದವಿ ಪರೀಕ್ಷೆಗಳ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಕಾಲೇಜಿಗೆ ಎಲ್ಲಾ ಪ್ರಾಧ್ಯಾಪಕರು ಬಂದು ಆನ್ಲೈನ್ ಮೂಲಕ ಪಾಠ, ಬೋಧನೆ ಮಾಡಬೇಕು. ಎಲ್ಲಾ ಪದವಿ ಪಠ್ಯಕ್ರಮ ಮೇ 30ರೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದ್ದಾರೆ.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಮಹಾರಾಷ್ಟ್ರ ಮಾದರಿಯಲ್ಲಿ ಪರೀಕ್ಷೆ ನಡೆಸಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡದೇ ತೇರ್ಗಡೆ ಮಾಡಬಹುದು ಎಂಬ ಸಲಹೆ ಕೇಳಿಬಂದಿದ್ದು, ಈ ವಿಚಾರವಾಗಿ ಮೇ 17ರ ನಂತರ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.