ಮಂಡ್ಯ, ಮೇ 10 (DaijiworldNews/PY) : ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ತಲೆಗೆ ಕೊಡಲಿ ಏಟು ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹರೆಕಲ್ಲ ದೊಡ್ಡಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಶನಿವಾರ ಗ್ರಾಮದ ವೆಂಕಟರಾಮು ಹಾಗೂ ಆಶಾ ದಂಪತಿ ಜಗಳವಾಡಿಕೊಂಡಿದ್ದಾರೆ. ಈ ಬಗ್ಗೆ ದೂರು ಬಂದ ಹಿನ್ನೆಲೆ ಮುಖ್ಯ ಪೇದೆ ಗುರುಶಾಂತಪ್ಪ ಜಗಳ ಬಿಡಿಸಲು ಹೋಗಿದ್ದು, ಈ ಸಂದರ್ಭ ಪಾನಮತ್ತಾದ ಪತಿ ವೆಂಕಟರಾಮು ಪೊಲೀಸ್ ಪೇದೆಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ.
ತೀವ್ರವಾಗಿ ಗಾಯಗೊಂಡ ಪೊಲೀಸ್ ಪೇದೆಯನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ದಂಪತಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆ ಮುಂದುವರೆದಿದೆ.