ಚೆನ್ನೈ, ಮೇ 10 (DaijiworldNews/PY) : ಈ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಮತ್ತೆ ಮದ್ಯದಂಗಡಿ ತೆರೆಯಲು ಮುಂದಾದರೆ, ಎಐಎಡಿಎಂಕೆ ಸರ್ಕಾರ ಮರಳಿ ಅಧಿಕಾರಕ್ಕೆ ಬರುವ ಕನಸು ಕಾಣಲು ಸಾಧ್ಯವಿಲ್ಲ. ಬೊಕ್ಕಸ ತುಂಬಿಸಿಕೊಳ್ಳಲು ದಯಮಾಡಿ ಬೇರೆ ಮಾರ್ಗ ಹುಡುಕಿರಿ ಎಂದು ನಟ ರಜನಿಕಾಂತ್ ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನಲ್ಲಿ ಈ ಸಂದರ್ಭದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದರೆ, ಎಐಎಡಿಎಂಕೆ ಸರ್ಕಾರ ಮರಳಿ ಅಧಿಕಾರಕ್ಕೆ ಬರುವ ಕನಸು ಕಾಣುವುದನ್ನು ಬಿಟ್ಟು ಬಿಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.
ಲಾಕ್ಡೌನ್ ಜಾರಿಯಲ್ಲಿ ಇರುವವರೆಗೆ ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಬೇಕು ಎನ್ನುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನ ನಲ್ಲಿ ಪ್ರಶ್ನೆ ಮಾಡಿತ್ತು.
ನಿನ್ನೆ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಾವು ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಶನಿವಾರ ಸರ್ಕಾರರದ ಪರ ವಕೀಲರೊಬ್ಬರು ತಿಳಿಸಿದ್ದರು.