ನವದೆಹಲಿ, ಮೇ 11 (Daijiworld News/MB) : ಕೇಂದ್ರ ಸರ್ಕಾರದ ಎಲ್ಲಾ ತೀರ್ಮಾನವನ್ನು ಟೀಕೆ, ವಿರೋಧ ಮಾಡುತ್ತಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಮೊದಲ ಬಾರಿಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಸ್ವಾಗತಿಸಿದ್ದಾರೆ.
ಕೊರೊನಾ ವೈರಸ್ನಿಂದಾಗಿ ದೇಶದಲ್ಲಿ ಉಂಟಾದ ಆರ್ಥಿಕ ಸಂಕಷ್ಟದ ನಿವಾರಣೆಗಾಗಿ ಕೇಂದ್ರ ಹೆಚ್ಚುವರಿಯಾಗಿ 4.2 ಲಕ್ಷ ಕೋಟಿ ರೂಪಾಯಿ ಸಾಲ ಮಾಡಲು ಮುಂದಾಗಿದ್ದು ಈ ನಿರ್ಧಾರವನ್ನು ಸ್ವಾಗತಿಸಿ ಸಹಮತ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಚಿದಂಬರಂ, ಈ ನಿರ್ಧಾರಕ್ಕೆ ಸ್ವಾಗತ, ಆದರೆ ಈ ಹಣವನ್ನು ಬಡವರಿಗೆ ಪರಿಹಾರ ಒದಗಿಸಲು ಹಾಗೂ ಆರ್ಥಿಕತೆಯ ಚೇತರಿಕೆಗಾಗಿ ವಿನಿಯೋಗ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ನಾವು ಸಾಲ ಮಾಡುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಸರ್ಕಾರ ಕೊನೆಗೂ 4.2 ಲಕ್ಷ ಕೋಟಿ ರುಪಾಯಿ ಹೆಚ್ಚುವರಿಯಾಗಿ ಸಾಲ ಮಾಡಲು ತೀರ್ಮಾನಿಸಿದೆ. ಆದರೂ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಲಾಗುತ್ತದೆ. ಆದರೆ ಹೆಚ್ಚಿನ ಸಾಲ ಮಾಡಿದರೆ ಮಾತ್ರ ಪ್ರಯೋಜನವಿಲ್ಲ. ಇದನ್ನು ಬಡವರಿಗೆ ಹಾಗೂ ಆರ್ಥಿಕತೆಯ ಚೇತರಿಕೆಗೆ ವಿನಿಯೋಗ ಮಾಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.