ನವದೆಹಲಿ, ಮೇ 11(Daijiworld News/MSP): ಕೊರೊನಾ ಸೋಂಕಿನ ವ್ಯಾಪಿಸುವಿಕೆ ವೇಗ ಪಡೆದಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 44029 ಮಂದಿ ಇನ್ನೂ ಸೋಂಕಿನಿಂದ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದ ೪೮೩ ಜಿಲ್ಲೆಗ್ಳಲ್ಲಿ 7740 ಆಸ್ಪತ್ರೆಗಳನ್ನು ಸೋಂಕಿತರ ಚಿಕಿತ್ಸೆಗಗಿಯೇ ಸಿದ್ದಪಡಿಸಲಾಗಿದೆ.ಮೂರು ವಿಭಾಗದಲ್ಲಿ ಇವುಗಳನ್ನು ಸಿದ್ದಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಕೆ ಮಾಹಿತಿ ನೀಡಿದೆ.
ಈ ನಡುವೆ ಮಹಾಮಾರಿ ವೈರಸ್'ಗೆ 2,206 ಮಂದಿ ಬಲಿಯಾಗಿದ್ದಾರೆ. ಕೊರೋನಾ ಹಾಟ್'ಸ್ಪಾಟ್ ಎಂಬ ಕುಖ್ಯಾತಿಗೆ ತುತ್ತಾಗಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಭಾನುವಾರ 1278 ಸೋಂಕು ಪ್ರಕರಣಗಳು ದೃಢವಾಗಿದ್ದು, 53 ಮಂದಿ ಸಾವನ್ನಪ್ಪಿದ್ದಾರೆ. ಮುಂಬೈ ಅಲ್ಲದೆ ಪುಣೆ, ಥಾಣೆ ,ದೆಹಲಿ, ಜೋದ್ ಪುರ ಜೈಪುರ, ಅಹಮದಾಬಾದ್ ,ಕೋಲ್ಕತ್ತಾ, ಚೆನ್ನೈ ಹಾಟ್ ಸ್ಪಾಟ್ ನಗರಗಳಾಗಿ ಗುರುತಿಸಿಕೊಂಡಿದೆ.