ನವದೆಹಲಿ, ಮೇ 11 (DaijiworldNews/PY) : ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನರಾರಂಭಿಸಲು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಆದರೆ, ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕವೇ 4ಜಿ ಇಂಟರ್ನೆಟ್ ಪುನರಾರಂಭಿಸುವ ತೀರ್ಮಾನ ತೆಗೆದುಕೊಳ್ಳುವ ವಿಚಾರವಾಗಿ ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಆಡಳಿತ ಗೃಹಸಚಿವಾಲಯದ ಕಾರ್ಯದರ್ಶಿಗಳನ್ನು ಒಳಗೊಂಡಿರುವ ಸಮಿತಿಯನ್ನು ರಚನೆ ಮಾಡುವಂತೆ ಸೂಚಿಸಿದೆ.
ಸುಪ್ರೀಂ ಪೀಠವು, ಗೃಹ ಸಚಿವಾಲಯದ ಕಾರ್ಯದರ್ಶಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚನೆ ಮಾಡುವಂತೆ ಸೂಚಿಸಿದ್ದು, 4ಜಿ ಇಂಟರ್ನೆಟ್ ಸಂಪರ್ಕ ನೀಡುವ ವಿಚಾರವಾಗಿ ಈ ಸಮಿತಿಯು ತೀರ್ಮಾನ ತೆಗೆದುಕೊಳ್ಳಬೇಕು ಎಂದಿದೆ.
ನಾವು ಜಮ್ಮು-ಕಾಶ್ಮೀರದಲ್ಲಿ ಬಿಕ್ಕಟ್ಟು ಇದ್ದಿರುವುದನ್ನು ಗಮನಿಸಿದ್ದೇವೆ. ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯ ಭದ್ರತೆ ಹಾಗೂ ಮಾನವ ಹಕ್ಕುಗಳನ್ನು ಸರಿತೂಗಿಸಿಕೊಂಡು ಹೋಗಬೇಕು. ಈ ನಡುವೆ ಕೊರೊನಾ ವೈರಸ್ ಹಾಗೂ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ವಿಚಾರವಾಗಿ ಸುಪ್ರೀಂ ಆತಂಕ ವ್ಯಕ್ತಪಡಿಸಿದೆ.