ಬೆಂಗಳೂರು, ಮೇ 12 (Daijiworld News/MB) : ಕೊರೊನಾ ಸೋಂಕು ಹರಡುವಿಕೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್ಸ್ಗಳು ಅತ್ಯಗತ್ಯ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಈ ಕುರಿತಾಗಿ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದು, ಕೊರೊನಾ ಕಾರಣದಿಂದಾಗಿ ರಾಜ್ಯದಲ್ಲಿ ಸಾರ್ವತ್ರಿಕ ಆರೋಗ್ಯ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಸಾರಿಗೆ ಸೇರಿದಂತೆ ಮೊದಲಾದ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆ ಒದಗಿಸಬೇಕು ಎಂದು ಕೋರಿದ್ದಾರೆ.
ಇನ್ನು ತರಗತಿಗಳ ಪುನರ್ ಮನನ, ತಜ್ಞ ಶಿಕ್ಷಕರಿಂದ ಉಪನ್ಯಾಸ ಸೇರಿ ಶೈಕ್ಷಣಿಕ ಚಟುವಟಿಕೆ ನಡೆಸಲು ಶಿಕ್ಷಣ ಇಲಾಖೆಗೆ ಪ್ರತ್ಯೇಕವಾಗಿ ಟಿವಿ ವಾಹಿನಿ ಆರಂಭಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ.