ನವದೆಹಲಿ, ಮೇ 12 (Daijiworld News/MB) : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿಯು, ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.
ದೇಶಾದಾದ್ಯಂತ ಇದೀಗ ಮೂರನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು ಅದು ಮೇ 17ರಂದು ಮುಕ್ತಾಯವಾಗಲಿದೆ. ಈ ನಡುವೆ ಮೇ 11 ರ ಸೋಮವಾರ ಮೋದಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದ್ದರು.
ರೋಗದ ಹರಡುವಿಕೆಯನ್ನು ಕಡಿಮೆ ಮಾಡುವುದರೊಂದಿಗೆ ಎಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡಿ ಕ್ರಮೇಣ ಚಟುವಟಿಕೆಗಳನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದರು.